ಬ್ರಹ್ಮಾವರದಲ್ಲಿ ಪರ್ಯಾಯ ಪೂರ್ವಭಾವಿ ಸಭೆ

ಬ್ರಹ್ಮಾವರದಲ್ಲಿ ಪರ್ಯಾಯ ಪೂರ್ವಭಾವಿ ಸಭೆ

ನವೆಂಬರ್ 8, 2015. ಬ್ರಹ್ಮಾವರದಲ್ಲಿ ಪರ್ಯಾಯ ಪೂರ್ವಭಾವಿ ಸಭೆ

ಪೇಜಾವರ ಶ್ರೀಗಳ ಪರ್ಯಾಯೋತ್ಸವದ ಬಗ್ಗೆಪೂರ್ವಭಾವಿ ಸಮಾಲೋಚನಾ ಸಭೆಯು ನವೆಂಬರ್ 8ರಂದು ಭಾನುವಾರ ಸಂಜೆ 4.30ಕ್ಕೆ ಬ್ರಹ್ಮಾವರ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಶಾಸಕ ಹಾಗೂ ಪರ್ಯಾಯೋತ್ಸವ ಅಧ್ಯಕ್ಷರಾದ ಪ್ರಮೋದ್ ಮಧ್ವರಾಜ್ , ಕೋಟ ಶ್ರೀನಿವಾಸ ಪೂಜಾರಿ, ಮಾಜಿ ಶಾಸಕ ರಘುಪತಿ ಭಟ್, ವಿ.ಹಿಂ.ಪ ಜಿಲ್ಲಾಧ್ಯಕ್ಷ ಬೈಕಾಡಿ ಸುಪ್ರಸಾದ್ ಶೆಟ್ಟಿ ಮುದಲಾದವರ ನೇತೃತ್ವದಲ್ಲಿ ಸಭೆ ನಡೆಯಲಿದ್ದು ಬ್ರಹ್ಮಾವರ-ಮಂದಾರ್ತಿ-ಬಾರ್ಕೂರು-ಕರ್ಜೆ-ಕೊಕ್ಕರ್ಣಿ ಕ್ಷೇತ್ರವ್ಯಾಪ್ತಿಯ ವಿವಿಧ ಸಂಘ ಸಂಸ್ಥೆಗಳ ಮುಖಂಡರು, ರಾಜಕೀಯ, ಸಾಮಾಜಿಕ ಧುರೀಣರು, ಭಜನಾ ಸಂಘಗಳ ಪ್ರತಿನಿಧಿಗಳು ಭಾಗವಹಿಸಲಿರುವರು. ಪರ್ಯಾತೋತ್ಸವ ಸಮಿತಿ ಅಧ್ಯಕ್ಷ ಭುವನೇಂದ್ರ ಕಿದಿಯೂರು, ಮಠದ ದಿವಾನರಾದ ರಘುರಾಮಾಚಾರ್, ಪ್ರಧಾನ ಕಾರ್ಯದರ್ಶಿ ಹೆರಂಜೆ ಕೃಷ್ಣ ಭಟ್, ಸಂಘಟನಾ ಸಂಚಾಲಕರಾದ ಮುರಳಿ ಕಡೆಕಾರ್, ಎಸ್. ವಿ. ಭಟ್, ಹೊರೆಕಾಣಿಕೆ ಸಮಿತಿಯ ಸಂಚಾಲಕರಾದ ಯಶ್‍ಪಾಲ್ ಸುವರ್ಣ, ದುಗ್ಗೇಗೌಡ ಮೊದಲಾದವರು ಉಪಸ್ಥಿತರಿರುವರು.

ನಾಗರೀಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ವಿನಂತಿಸಲಾಗಿದೆ.