ಉಡುಪಿ ಜಿಲ್ಲಾ ಸರ್ವ ಕಾಲೇಜು ವಿದ್ಯಾರ್ಥಿ ಸಂಘ

ಉಡುಪಿ ಜಿಲ್ಲಾ ಸರ್ವ ಕಾಲೇಜು ವಿದ್ಯಾರ್ಥಿ ಸಂಘ

ಉಡುಪಿ ಜಿಲ್ಲಾ ಸರ್ವ ಕಾಲೇಜು ವಿದ್ಯಾರ್ಥಿ ಸಂಘದವರು ಗೋರಕ್ಷಣೆಗಾಗಿ ಉಡುಪಿ,ಮಣಿಪಾಲ,ಮಲ್ಪೆ,ಕುಂದಾಪುರದಲ್ಲಿ ಎರಡು ದಿನಗಳಲ್ಲಿ ಧನ ಸಂಗ್ರಹಣಾ ಕಾರ್ಯಕ್ರಮ ಹಮ್ಮಿಕೊಂಡಿದ್ದು ಸಂಗ್ರಹವಾದ ನಿಧಿಯನ್ನು ನಂತರ ನೀಲಾವರ ಗೋಶಾಲೆಗೆ ಅರ್ಪಿಸಲಿದ್ದಾರೆ. ಈ ಧನ ಸಂಗ್ರಹಣಾ ಕಾರ್ಯಕ್ರಮಕ್ಕೆ ಪರ್ಯಾಯ ಪೇಜಾವರ ಕಿರಿಯ ಯತಿಗಳಾದ ಶ್ರೀ ವಿಶ್ವಪ್ರಸನ್ನ ತೀರ್ಥ ಶ್ರೀಪಾದರು ದೇಣಿಗೆ ನೀಡುವ ಮೂಲಕ ಚಾಲನೆ ನೀಡಿದರು. ಸರ್ವ ಕಾಲೇಜು ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ವಿಘ್ನೇಶ್ ಭಟ್,ರಾಜ್ಯ ಕಾರ್ಯದರ್ಶಿ ಸೂರಜ್ ಇಂದ್ರಾಳಿ,ಜಿಲ್ಲಾ ಕಾರ್ಯದರ್ಶಿ ಸಮೃದ್ ಭಟ್,ಕೃಪಾಕರ್ ಶೆಟ್ಟಿ,ಪ್ರಸನ್ನ ಶೆಟ್ಟಿ ಮತ್ತು ಶ್ವೇತಾ ಅಡಿಗ ಮೊದಲಾದ ವಿದ್ಯಾರ್ಥಿಗಳು ಉಪಸ್ಥಿತರಿದ್ದು ಈ ಕೆಲಸದಲ್ಲಿ ತಮ್ಮನ್ನು ತೊಡಗಿಸಿಕೊಂಡರು.

 - ಉಡುಪಿ ಜಿಲ್ಲಾ ಸರ್ವ ಕಾಲೇಜು ವಿದ್ಯಾರ್ಥಿ ಸಂಘ
 - ಉಡುಪಿ ಜಿಲ್ಲಾ ಸರ್ವ ಕಾಲೇಜು ವಿದ್ಯಾರ್ಥಿ ಸಂಘ
 - ಉಡುಪಿ ಜಿಲ್ಲಾ ಸರ್ವ ಕಾಲೇಜು ವಿದ್ಯಾರ್ಥಿ ಸಂಘ